
ಪಿಟಿಐ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ನಾಲ್ವರು ಬಾಲಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಹಂದ್ವಾರದ ಟುಟಿಗುಂಡ್ ಹಳ್ಳಿಯಲ್ಲಿ ಬಾಲಕರು ಕ್ರಿಕೆಟ್ ಆಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ.
ಗಾಯಗೊಂಡ ಬಾಲಕರನ್ನು ಉಜೈರ್ ತಾಹೀರ್, ಸಾಜಿದ್ ರಶೀದ್, ಹಜೀಮ್ ಶಬೀರ್ ಮತ್ತು ಝೆಯಾರ್ ತಾಹೀರ್ ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಹಂದ್ವಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.