
ಸಿಎಂ ಸಿದ್ದರಾಮಯ್ಯ- ಚಂದ್ರಬಾಬು ನಾಯ್ಡು
ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು–ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ ಸುಮಾರು 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪೋಸ್ಟ್ ಹಂಚಿಕೊಂಡು ಸಂತಾಪ ಸೂಚಿಸಿದ್ದಾರೆ.
‘ಕರ್ನೂಲ್‌ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ' ಎಂದು ಸಿದ್ದರಾಮಯ್ಯ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಕರ್ನೂಲ್ ಬಳಿ ಭೀಕರ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ ಅನೇಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ನನಗೆ ಆಘಾತವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ಕರುಣಿಸಲಿ. ಗಾಯಗೊಂಡವರು ಮತ್ತು ಮೃತರ ಕುಟುಂಬಗಳಿಗೆ ಸರ್ಕಾರ ಅಗತ್ಯವಿರುವ ಸಹಾಯ ಮಾಡುತ್ತದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.