
ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 20 ಮಂದಿ ಸಜೀವ ದಹನರಾಗಿದ್ದು, ಈ ಘಟನೆ ಸಂಬಂಧ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡು ಮೋದಿ ಸಂತಾಪ ಸೂಚಿಸಿದ್ದಾರೆ.
ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತರ ಕುಟುಂಬಗಳ ಜತೆ ನಾವಿದ್ದೇವೆ. ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಎಂದು ಮೋದಿ ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ ₹2 ಲಕ್ಷ ನೀಡಲಾಗುವುದು ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ಕೊಡಲಾಗವುದು ಎಂದು ಮೋದಿ ಹೇಳಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಸ್ಸಿನ ಬಾಗಿಲು ಮುಚ್ಚಿಹೋಗಿತ್ತು.ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು. ಬದುಕುಳಿದವರಲ್ಲಿ ಹೆಚ್ಚಿನವರು 25 ರಿಂದ 35 ವರ್ಷ ವಯಸ್ಸಿನವರು ಎಂದು ಪೊಲೀಸರು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.