
ಕರ್ನೂಲ್: ಕರ್ನೂಲುನಲ್ಲಿ ಖಾಸಗಿ ಬಸ್‌ಗೆ ಬೆಂಕಿ ಹತ್ತಿಕೊಂಡ ಪರಿಣಾಮ ಮೃತಪಟ್ಟ 19 ಜನರ ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಡಿಎನ್‌ಎ ಪರೀಕ್ಷೆಯ ಆಧಾರದಲ್ಲಿ ಮೃತರ ಗುರುತು ಪತ್ತೆ ಮಾಡಿ, ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
‘ಬಿಹಾರ ಮತ್ತು ತಮಿಳುನಾಡಿನವರ ಮೃತದೇಹಗಳನ್ನು ಆಂಧ್ರಪ್ರದೇಶದಲ್ಲೇ ಅಂತ್ಯಸಂಸ್ಕಾರ ಮಾಡಲು ಅವರ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಸರ್ಕಾರ ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಯ ಎ.ಸಿ. ಸ್ಲೀಪರ್ ಬಸ್‌ಗೆ ಬೆಂಕಿ ಹತ್ತಿಕೊಂಡು 19 ಮಂದಿ ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಬೈಕ್ ಸವಾರ ಮದ್ಯಪಾನ ಮಾಡಿ, ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂಬುದು ಎಫ್‌ಎಸ್‌ಎಲ್ ವರದಿಯಲ್ಲಿ ದೃಢಪಟ್ಟಿದೆ.
ಬಸ್ಸು ಕರ್ನೂಲ್ ಜಿಲ್ಲೆಯ ಚಿನ್ನತೇಕೂರು ಗ್ರಾಮದ ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿತ್ತು. ಘಟನೆಯಲ್ಲಿ ಬಸ್‌ನಲ್ಲಿದ್ದ 44 ಜನರ ಪೈಕಿ 19 ಜನರು ಸಜೀವ ದಹನಗೊಂಡಿದ್ದರು. ಬೈಕ್ ಸವಾರನು ಮೃತಪಟ್ಟಿದ್ದನು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.