ADVERTISEMENT

ಪ್ರಧಾನಿ ಮೋದಿಯವರ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದ್ದ ಕಾರ್ಮಿಕ ಆತ್ಮಹತ್ಯೆ

ಪಿಟಿಐ
Published 18 ಡಿಸೆಂಬರ್ 2021, 8:21 IST
Last Updated 18 ಡಿಸೆಂಬರ್ 2021, 8:21 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಾರಾಣಸಿ: ಡಿಸೆಂಬರ್ 23 ರಂದು ಪ್ರಧಾನಿ ನರೇಂದ್ರ ಮೋದಿಯವರು ವಾರಾಣಸಿಗೆ ಭೇಟಿ ನೀಡಲಿರುವ ಅಂಗವಾಗಿ ಕಾರ್ಯಕ್ರಮದ ತಯಾರಿಯಲ್ಲಿ ತೊಡಗಿದ್ದ 36 ವರ್ಷದ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಧ್ಯ ಪ್ರದೇಶದ ಮಂದಸೌರ್ ಜಿಲ್ಲೆಯ ಅಫಜಲಪುರದ ನಿವಾಸಿ ವಿಕ್ರಮ್, ಅನಾರೋಗ್ಯದ ಕಾರಣದಿಂದಾಗಿ ಖಿನ್ನತೆಗೆ ಒಳಗಾಗಿದ್ದರು. ಶುಕ್ರವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಫುಲ್ಪುರ್ ಪೊಲೀಸ್ ಠಾಣೆ ಪ್ರದೇಶದ ಪಿಂದ್ರ ಕರ್ಖಿನವ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಉದ್ದೇಶಿತ ರ‍್ಯಾಲಿಯ ಸಿದ್ಧತೆ ಕೆಲಸವನ್ನು ಈತ ಮಾಡುತ್ತಿದ್ದ. ಅದೇ ಸ್ಥಳದ ಪಕ್ಕದಲ್ಲಿ ಕಂಬಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.