ಸಾವು (ಪ್ರಾತಿನಿಧಿಕ ಚಿತ್ರ)
ಅಯೋಧ್ಯೆ: ಉತ್ತರ ಪ್ರದೇಶದ ಪುರಕಲಂದರ್ ಪ್ರದೇಶದ ಕೆಎಂ ಸಕ್ಕರೆ ಕಾರ್ಖಾನೆಯಲ್ಲಿ ಇಂದು (ಮಂಗಳವಾರ) ಓವರ್‌ಹೆಡ್ ನೀರಿನ ಟ್ಯಾಂಕ್ ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
40,000 ಲೀಟರ್ ನೀರಿನ ಟ್ಯಾಂಕ್ ಹಠಾತ್ತನೆ ಕುಸಿದು ಬಿದ್ದಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಧುವನ್ ಸಿಂಗ್ ಹೇಳಿದ್ದಾರೆ.
ಘಟನೆಯಲ್ಲಿ ಪ್ರವೇಶ್ ರಾವತ್ (40) ಎಂಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂದ ಕುಮಾರ್ ಪಾಂಡೆ (46) ಮತ್ತು ವಿನೋದ್ ಕುಮಾರ್ (30) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ–ವಿಭಾಗೀಯ ಮ್ಯಾಜಿಸ್ಟ್ರೇಟ್ ವಿಕಾಸ್ ದುಬೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.