ಅಹಮದಾಬಾದ್: ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು 12 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ದುರಂತ ಸಂಭವಿಸಿದೆ ಎಂದು ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್ ಮೆರ್ಜಾ ತಿಳಿಸಿದ್ದಾರೆ.
ಅವಶೇಷಗಳಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.