ADVERTISEMENT

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಎಂಟು ವಲಸೆ ಕಾರ್ಮಿಕರ ಸಾವು, 50 ಮಂದಿಗೆ ಗಾಯ

ಏಜೆನ್ಸೀಸ್
Published 14 ಮೇ 2020, 3:03 IST
Last Updated 14 ಮೇ 2020, 3:03 IST
ಗಾಯಾಳುಗಳನ್ನು ಹತ್ತಿರದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. (ಎಎನ್‌ಐ)
ಗಾಯಾಳುಗಳನ್ನು ಹತ್ತಿರದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. (ಎಎನ್‌ಐ)   

ಗುನಾ (ಮಧ್ಯಪ್ರದೇಶ):ಮಧ್ಯಪ್ರದೇಶ ಗುನಾದಲ್ಲಿ ಬುಧವಾರ ತಡರಾತ್ರಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್‌ ಒಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕಳೆದ ರಾತ್ರಿ ಗುನಾದ ಕ್ಯಾಂಟ್ ಪಿ.ಎಸ್ ಪ್ರದೇಶದಲ್ಲಿ ಬಸ್‌ಗೆ ಟ್ರಕ್‌ ಡಿಕ್ಕಿ ಹೊಡೆದಿದೆ. ಟ್ರಕ್‌ನಲ್ಲಿದ್ದ 8 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 50 ಜನರು ಗಾಯಗೊಂಡಿದ್ದಾರೆ.

ಕಾರ್ಮಿಕರು ಮಹಾರಾಷ್ಟ್ರದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ತವರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.