ಸೋನಮ್ ವಾಂಗ್ಚುಕ್
ನವದೆಹಲಿ: ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವುದರ ಜೊತೆಗೆ ಅದನ್ನು ಸಂವಿಧಾನದ 6ನೇ ಪರಿಚ್ಛೇದಕ್ಕೆ ಸೇರಿಸುವಂತೆ ಒತ್ತಾಯಿಸಿ ಲೇಹ್‌ನಲ್ಲಿ 35 ದಿನಗಳ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಬುಧವಾರ ತಿಳಿಸಿದ್ದಾರೆ. ಲೇಹ್ ಅಪೆಕ್ಸ್ ನಿಯೋಗ (ಎಲ್‌ಎಬಿ) ಕೂಡ ಇದನ್ನು ಸ್ಪಷ್ಟಪಡಿಸಿದೆ.
‘ಕಳೆದ ಎರಡು ತಿಂಗಳಿಂದ ನಮ್ಮ ಬೇಡಿಕೆಗಳ ಕುರಿತು ಕೇಂದ್ರ ಗೃಹ ಸಚಿವಾಲಯವು ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದೇವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ವಾಂಗ್ಚುಕ್ ತಿಳಿಸಿದರು.
ಲೇಹ್‌ನ ಹಿಲ್ ಕೌನ್ಸಿಲ್ ಚುನಾವಣೆ ಶೀಘ್ರವೇ ನಡೆಯಲಿದ್ದು, ಕೇಂದ್ರ ಸರ್ಕಾರವು ಕಳೆದ ಬಾರಿಯ ಚುನಾವಣೆಯಲ್ಲೇ ಲಡಾಖ್ ಅನ್ನು ಸಂವಿಧಾನದ 6ನೇ ಪರಿಚ್ಛೇದಕ್ಕೆ ಸೇರಿಸುವುದಾಗಿ ಭರವಸೆ ನೀಡಿತ್ತು. ಇದನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಗಾಂಧಿ ಜಯಂತಿಯು ಸತ್ಯಾಗ್ರಹದ ಪ್ರಮುಖ ದಿನವಾಗಲಿದೆ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.