ADVERTISEMENT

ವಾಂಗ್ಚೂಕ್ ಬಂಧನ: ಅ. 15ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

ಲಡಾಕ್‌ ಹಿಂಸಾಚಾರ ಪ್ರಕರಣ–ವಾಂಗ್ಚೂಕ್ ಬಂಧನ– ‘ಸುಪ್ರೀಂ’ನಲ್ಲಿ ಪ್ರಶ್ನಿಸಿದ್ದ ಗೀತಾಂಜಲಿ

ಪಿಟಿಐ
Published 14 ಅಕ್ಟೋಬರ್ 2025, 14:14 IST
Last Updated 14 ಅಕ್ಟೋಬರ್ 2025, 14:14 IST
 ಸೊನಮ್‌ ವಾಂಗ್ಚೂಕ್
 ಸೊನಮ್‌ ವಾಂಗ್ಚೂಕ್   

ನವದೆಹಲಿ: ಬಂಧನದಲ್ಲಿರುವ ಪರಿಸರ ಹೋರಾಟಗಾರ ಸೊನಮ್‌ ವಾಂಗ್ಚೂಕ್ ಅವರ ಬಿಡುಗಡೆ ಕೋರಿ, ಅವರ ಪತ್ನಿ ಗೀತಾಂಜಲಿ ಆಂಗ್ಮೊ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌, ಅಕ್ಟೋಬರ್‌ 15ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಅರವಿಂದ್‌ ಕುಮಾರ್, ಎನ್‌.ವಿ.ಅಂಜಾರಿಯಾ ನೇತೃತ್ವದ ನ್ಯಾಯಪೀಠವು ಸಮಯದ ಕೊರತೆಯಿಂದ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ವಾಂಗ್ಚೂಕ್ ಬಂಧನದ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಲಡಾಖ್‌ ಸರ್ಕಾರಗಳಿಗೆ ಅಕ್ಟೋಬರ್‌ 16ರಂದು ನಿರ್ದೇಶನ ನೀಡಿತ್ತು.  

ADVERTISEMENT

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದ ಕಾರಣಕ್ಕೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ವಾಂಗ್ಚೂಕ್‌ ಅವರನ್ನು ಸೆ.26ರಂದು ಬಂಧಿಸಲಾಯಿತು. ಇದನ್ನು ಪ್ರಶ್ನಿಸಿ ಗೀತಾಂಜಲಿ ಅವರು ‘ಸುಪ್ರೀಂ’ ಮೆಟ್ಟಿಲೇರಿದ್ದಾರೆ. ವಾಂಗ್ಚೂಕ್‌ ಅವರನ್ನು ರಾಜಸ್ಥಾನದ ಜೋಧಪುರ ಜೈಲಿನಲ್ಲಿರಿಸಲಾಗಿದೆ.

ಲಡಾಖ್‌ಗೆ 6ನೇ ಪರಿಚ್ಛೇದದ ಮತ್ತು ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, 4 ಮಂದಿ ಮೃತಪಟ್ಟಿದ್ದು, 90 ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.