ADVERTISEMENT

ಲಖಿಂಪುರ ಖೇರಿ; ಆಶಿಶ್ ಮಿಶ್ರಾ ಜಾಮೀನು ರದ್ದತಿ: ಏ.18ಕ್ಕೆ 'ಸುಪ್ರೀಂ' ತೀರ್ಪು

ಪಿಟಿಐ
Published 17 ಏಪ್ರಿಲ್ 2022, 11:19 IST
Last Updated 17 ಏಪ್ರಿಲ್ 2022, 11:19 IST
ಆಶಿಶ್ ಮಿಶ್ರಾ, ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ
ಆಶಿಶ್ ಮಿಶ್ರಾ, ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ   

ನವದೆಹಲಿ:ಲಖಿಂಪುರ ಖೇರಿ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನು ರದ್ದತಿ ಕೋರಿದ ಅರ್ಜಿಗೆ ಸಂಬಂಧಿಸಿದಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಕಟಿಸಲಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರ ನೇತೃತ್ವದ ಪೀಠವು ಸೋಮವಾರ ಬೆಳಗ್ಗೆ 10.30ಕ್ಕೆ ತೀರ್ಪನ್ನು ಪ್ರಕಟಿಸುವ ಸಾಧ್ಯತೆಯಿದೆ. ಆಶಿಶ್ ಮಿಶ್ರಾ ಅವರ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ರೈತರು ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 4ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿತ್ತು.

ಕಳೆದ ವರ್ಷದ ಅಕ್ಟೋಬರ್ 3ರಂದು ನಡೆದಿದ್ದ ಲಖಿಂಪುರ ಖೇರಿ ಹಿಂಸಾಚಾರ ಘಟನೆಯಲ್ಲಿ ಪ್ರತಿಭಟನನಿರತ ನಾಲ್ವರು ರೈತರು ಸೇರಿದಂತೆ 8 ಮಂದಿ ಬಲಿಯಾಗಿದ್ದರು. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರು ಪ್ರಮುಖ ಆರೋಪಿಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.