ADVERTISEMENT

ಲಖಿಂಪುರ: ಸ್ವಪ್ರೇರಿತ ವಿಚಾರಣೆ ನಡೆಸುವಂತೆ ಸುಪ್ರೀಂಗೆ ಕಪಿಲ್ ಸಿಬಲ್ ಒತ್ತಾಯ

ಪಿಟಿಐ
Published 6 ಅಕ್ಟೋಬರ್ 2021, 9:47 IST
Last Updated 6 ಅಕ್ಟೋಬರ್ 2021, 9:47 IST
ಕಪಿಲ್ ಸಿಬಲ್
ಕಪಿಲ್ ಸಿಬಲ್   

ನವದೆಹಲಿ: ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಹತ್ಯೆಗೆ ಕಾರಣವಾದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸುವಂತೆ ಹಿರಿಯ ಕಾಂಗ್ರೆಸ್‌ ನಾಯಕ ಕಪಿಲ್ ಸಿಬಲ್ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಯೂಟ್ಯೂಬ್‌ ಮತ್ತಿತರ ಸಾಮಾಜಿಕ ಮಾಧ್ಯಮಗಳಿಲ್ಲದ ಕಾಲದಲ್ಲಿ ಸುಪ್ರೀಂ ಕೋರ್ಟ್‌ ಮುದ್ರಣ ಮಾಧ್ಯಮದಲ್ಲಿ ಪ್ರಕಟವಾಗುತ್ತಿದ್ದ ಸುದ್ದಿಯನ್ನು ಆಧರಿಸಿ ಸ್ವಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿತ್ತು. ನ್ಯಾಯಾಲಯ, ಧ್ವನಿವಂಚಿತರಿಗೆ ಧ್ವನಿಯಾಗಿತ್ತು‘ ಎಂದು ಹೇಳಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರದ ಘಟನೆಯನ್ನು ಉಲ್ಲೇಖಿಸಿದ ಸಿಬಲ್ ಅವರು, ‘ಇಂದು ಕೊಲೆ ಪ್ರಕರಣಗಳು ನಡೆದರೂ ನಾಗರಿಕರು ಅದರಿಂದ ದೂರ ಉಳಿಯುತ್ತಿರುವ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್‌ ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ‘ ಎಂದು ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.