ADVERTISEMENT

ಲಖಿಂಪುರ ಖೇರಿ ಪ್ರಕರಣ: ಅಜಯ್‌ ಮಿಶ್ರಾರನ್ನು ವಜಾಗೊಳಿಸಲು ಕೇಂದ್ರ ಸರ್ಕಾರ ನಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಡಿಸೆಂಬರ್ 2021, 12:13 IST
Last Updated 15 ಡಿಸೆಂಬರ್ 2021, 12:13 IST
ಅಜಯ್‌ ಕುಮಾರ್‌ ಮಿಶ್ರಾ
ಅಜಯ್‌ ಕುಮಾರ್‌ ಮಿಶ್ರಾ    

ನವದೆಹಲಿ:ಲಖಿಂಪುರ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್‌ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ವಿರೋಧ ಪಕ್ಷಗಳು ಸಂಸತ್‌ನಲ್ಲಿ ಒತ್ತಾಯಿಸಿವೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ‘ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸುವ ಅವಶ್ಯಕತೆ ಇಲ್ಲ‘ ಎಂದು ಹೇಳಿದೆ.

ಲಖಿಂಪುರ–ಖೇರಿ ಪ್ರಕರಣವು ‘ಪೂರ್ವಯೋಜಿತ ಷಡ್ಯಂತ್ರ’ ಎಂದು ವಿಶೇಷ ತನಿಖಾ ತಂಡವು ಹೇಳಿದೆ. ಆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಮಿಶ್ರಾರನ್ನು ವಜಾಗೊಳಿಸಬೇಕೆಂದು ಪಟ್ಟು ಹಿಡಿದಿವೆ. ಅಜಯ್‌ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾ ಅವರು ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ADVERTISEMENT

ಮಿಶ್ರಾ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಇದನ್ನು (ಲಖಿಂಪುರ ಖೇರಿ ಪ್ರಕರಣ) ಪೂರ್ವಯೋಜಿತ ಷಡ್ಯಂತ್ರಹೇಳಲಾಗಿದೆ. ಇದರಲ್ಲಿ ಯಾರ ಮಗ ಭಾಗಿಯಾಗಿದ್ದಾನೆ ಎಂಬುದು ಎಲ್ಲರಿಗೂ ತಿಳಿದಿದೆ. ಸಚಿವರು (ಅಜಯ್ ಮಿಶ್ರಾ) ರಾಜೀನಾಮೆ ನೀಡಬೇಕೆಂದು ನಾವು ಬಯಸುತ್ತೇವೆ. ಈ ಕುರಿತು ಸಂಸತ್ತಿನಲ್ಲಿ ಚರ್ಚೆ ಆಗಬೇಕಿದೆ. ಆದರೆ, ಪ್ರಧಾನಿ ಮೋದಿ ಇದಕ್ಕೆ ಸಮ್ಮತಿ ಸೂಚಿಸುತ್ತಿಲ್ಲ‘ ಎಂದು ಆರೋಪಿಸಿದ್ದಾರೆ. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.