ADVERTISEMENT

ಲಖಿಂಪುರ ಖೇರಿ ಪ್ರಕರಣ: ಆಶಿಶ್‌ ಮಿಶ್ರಾ, ಇತರ ಆರೋಪಿಗಳ ವಿರುದ್ಧ ದೋಷಾರೋಪ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 14:43 IST
Last Updated 6 ಡಿಸೆಂಬರ್ 2022, 14:43 IST
ಆಶಿಶ್‌ ಮಿಶ್ರಾ
ಆಶಿಶ್‌ ಮಿಶ್ರಾ   

ಲಖನೌ: ಲಖಿಂಪುರಖೇರಿ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಮಗ ಆಶಿಶ್‌ ಮಿಶ್ರಾ ಮತ್ತು ಇತರ 12 ಮಂದಿಯ ವಿರುದ್ಧ ಇಲ್ಲಿನ ಜಿಲ್ಲಾ ನ್ಯಾಯಾಲಯ ಮಂಗಳವಾರ ದೋಷಾರೋಪ ಹೊರಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಆಶಿಶ್‌ ಮಿಶ್ರಾ ಮತ್ತು ಉಳಿದ ಆರೋಪಿಗಳ ವಿರುದ್ಧ 302 (ಕೊಲೆ), 120 ಬಿ (ಕ್ರಿಮಿನಲ್‌ ಪಿತೂರಿ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಆರೋಪ ಹೊರಿಸಲಾಗಿದೆ.

ಪ್ರಕರಣದ ಮುಂದಿನ ವಿಚಾರಣೆ ಡಿಸೆಂಬರ್‌ 16 ರಂದು ನಡೆಯಲಿದೆ ಎಂದು ಸರ್ಕಾರಿ ಅಭಿಯೋಜಕ ಅರವಿಂದ ತ್ರಿಪಾಠಿ ತಿಳಿಸಿದ್ದಾರೆ.

ADVERTISEMENT

‘ಘಟನೆ ನಡೆಯುವ ವೇಳೆ ಅಲ್ಲಿರದ ಕಾರಣ ತಮ್ಮ ಹೆಸರುಗಳನ್ನು ಪ್ರಕರಣದಿಂದ ಕೈಬಿಡಬೇಕು’ ಎಂದು ಕೋರಿ ಆಶಿಶ್‌ ಹಾಗೂ ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಸೋಮವಾರ ವಜಾಗೊಳಿಸಿತ್ತು.

ಕೇಂದ್ರ ರೂಪಿಸಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ ವರ್ಷ ಅಕ್ಟೋಬರ್‌ನಲ್ಲಿ ರೈತರು ಲಖಿಂಪುರ–ಖೀರಿಯಲ್ಲಿ ಪ್ರತಿಭಟಿಸುವ ಸಂದರ್ಭದಲ್ಲಿ ವೇಗವಾಗಿ ವಾಹನ ಹರಿಸಿದ ಪರಿಣಾಮ ನಾಲ್ವರು ರೈತರು, ಸ್ಥಳೀಯ ಪತ್ರಕರ್ತ ಸೇರಿ ಎಂಟು ಮಂದಿ ಸಾವನ್ನಪ್ಪಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.