
ಪ್ರಜಾವಾಣಿ ವಾರ್ತೆ
ಪುರಿ: ಹೊಸ ವರ್ಷ 2025ರ ಆರಂಭದ ಮೊದಲ ದಿನವಾದ ಇಂದು (ಜ.1) ಪುರಿ ಜಗನ್ನಾಥನ ದರ್ಶನಕ್ಕೆ ಲಕ್ಷಾಂತರ ಜನ ಆಗಮಿಸಿದ್ದು, ಕಿಲೋ ಮೀಟರ್‌ಗೂ ಹೆಚ್ಚು ದೂರ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು.
12ನೇ ಶತಮಾನದ ಜಗನ್ನಾಥ ದೇಗುಲದ ಸಿಂಹ ದ್ವಾರದ ಮೂಲಕ ಭಕ್ತರ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರ ದರ್ಶನಕ್ಕೆ ಯಾವುದೇ ರೀತಿಯ ಅಡ್ಡಿಯಾಗದಂತೆ ಪುರಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ದೇವಾಲಯದ ಬಳಿ ಆ್ಯಂಬುಲೆನ್ಸ್, ತುರ್ತು ಚಿಕಿತ್ಸೆ ಸೇರಿದಂತೆ ಸಿಸಿಟಿವಿ ಅಳವಡಿಸಲಾಗಿತ್ತು ಎಂದು ಎಸ್‌ಪಿ ವಿನೀತ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಭಕ್ತರ ಸಂಖ್ಯೆ ಹೆಚ್ಚಿದ್ದ ಕಾರಣ ಬೆಳಗಿನ ಜಾವ 1.05ಕ್ಕೆ ದೇವಾಲಯದ ಬಾಗಿಲನ್ನು ತೆರೆಯಲಾಗಿತ್ತು ಎಂದು ದೇಗುಲದ ಮುಖ್ಯ ಆಡಳಿತಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.