ADVERTISEMENT

Lal Bahadur Shastri: ಶಾಸ್ತ್ರಿ ಪುಣ್ಯಸ್ಮರಣೆಗೆ ಗಣ್ಯರಿಂದ ನಮನ

ಏಜೆನ್ಸೀಸ್
Published 11 ಜನವರಿ 2024, 7:46 IST
Last Updated 11 ಜನವರಿ 2024, 7:46 IST
<div class="paragraphs"><p>ಲಾಲ್&nbsp;ಲಾಲ್ ಬಹದ್ದೂರ್ ಶಾಸ್ತ್ರಿ</p></div>

ಲಾಲ್ ಲಾಲ್ ಬಹದ್ದೂರ್ ಶಾಸ್ತ್ರಿ

   

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯಸ್ಮರಣೆ ಅಂಗವಾಗಿ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. 

'ಜೈ ಜವಾನ್ - ಜೈ ಕಿಸಾನ್' ಘೋಷಣೆಯ ಮೂಲಕ ಭಾರತೀಯರನ್ನು ಸ್ವಾತಂತ್ರ್ಯ ಸಂಗ್ರಾಮ ಮತ್ತು ರಾಷ್ಟ್ರನಿರ್ಮಾಣದಲ್ಲಿ ತೊಡಗಿಸಿದ ಅಪ್ರತಿಮ ದೇಶಭಕ್ತ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯಸ್ಮರಣೆಯಂದು ಗೌರವದಿಂದ ಸ್ಮರಿಸುತ್ತಾ, ನನ್ನ ನಮನಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. 

ADVERTISEMENT

ಮಾಜಿ ಪ್ರಧಾನಿ, ಭಾರತ ರತ್ನ ಶಾಸ್ತ್ರಿ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತೇವೆ. 'ಜೈ ಜವಾನ್, ಜೈ ಕಿಸಾನ್'ನೊಂದಿಗೆ ಅವರು ಮುನ್ನಡೆಸಿದ ಹಸಿರು ಕ್ರಾಂತಿ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ ಎಂದು ಕೇಂದ್ರ ಸಚಿವ  ಪ್ರಲ್ಹಾದ ಜೋಶಿ ಟ್ವೀಟ್‌ ಮಾಡಿದ್ದಾರೆ. 

‘ನಮ್ಮ ಶಕ್ತಿಗೆ ಇರುವ ಅತ್ಯಂತ ಮುಖ್ಯವಾದ ಕಾರ್ಯವೆಂದರೆ ಜನರನ್ನು ಒಂದುಗೂಡಿಸುವುದು‘ ಎಂಬ ಶಾಸ್ತ್ರಿ ಅವರ ಹೇಳಿಕೆಯನ್ನು ಟ್ವೀಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಅವರನ್ನು ಸ್ಮರಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.