ಸಮೀರ್ ಮೋದಿ
ಚಿತ್ರಕೃಪೆ Linkedin
ನವದೆಹಲಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಲಲಿತ್ ಮೋದಿ ಸೋದರ ಸಂಬಂಧಿ ಸಮೀರ್ ಮೋದಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.
ಈ ಅರ್ಜಿಯ ವಿಚಾರಣೆಯನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿಪಿನ್ ಖಾರ್ಬ್ ನಡೆಸಿದರು.
₹5 ಲಕ್ಷ ವೈಯಕ್ತಿಕ ಹಾಗೂ ಭದ್ರತಾ ಬಾಂಡ್, ದೇಶವನ್ನು ಬಿಟ್ಟು ಹೋಗದಿರುವುದು, ವಿಚಾರಣೆಗೆ ಹಾಜರಾಗುವುದು, ಯಾವುದೇ ಅಪರಾಧ ಚಟುವಟಿಕೆಯಲ್ಲಿ ತೊಡಗದಿರುವುದು ಸೇರಿದಂತೆ ಸಾಕ್ಷ್ಯಗಳನ್ನು ಹಾಳು ಮಾಡದಂತೆ ಇತರೆ ಷರತ್ತುಗಳ ಅನ್ವಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸಂತ್ರಸ್ತೆಯ ಮೇಲೆ ಪ್ರಭಾವ ಬೀರಬಹುದು ಮತ್ತು ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ಪರ ವಕೀಲರು ವಾದಿಸಿದ್ದರು. ಈ ವೇಳೆ ಸಾಕ್ಷ್ಯಗಳು ಧೃಡಪಡಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಈ ಪ್ರಕರಣದಲ್ಲಿ ಇನ್ನು ಮುಂದೆ ಸಮೀರ್ ಮೋದಿ ಕಸ್ಟಡಿಯಲ್ಲಿ ಇರುವ ಅಗತ್ಯತೆ ಇಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಲಾಗಿದೆ ಎಂದು ವಿಪಿನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.