ಪಾಟ್ನಾ: ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರು ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆ ಬಯಸಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಮೂರು ದಶಕದಿಂದ ಪಕ್ಷವನ್ನು ಮುನ್ನಡೆಸುತ್ತಿರುವ ಲಾಲು ಅವರ ಅಧ್ಯಕ್ಷ ಸ್ಥಾನದ ಅವಧಿ ಮುಕ್ತಾಯಗೊಂಡಿರುವ ಕಾರಣ ಇದೀಗ ಮತ್ತೆ ಚುನಾವಣೆ ನಡೆಯಲಿದೆ. ತಮ್ಮ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರೊಂದಿಗೆ ಪಕ್ಷದ ಕಚೇರಿಗೆ ಆಗಮಿಸಿದ ಅವರು, ನಾಮಪತ್ರ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.