ADVERTISEMENT

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ಜ್ವರ: ಏಮ್ಸ್‌ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ನವೆಂಬರ್ 2021, 5:13 IST
Last Updated 27 ನವೆಂಬರ್ 2021, 5:13 IST
ಲಾಲು ಪ್ರಸಾದ್ ಯಾದವ್ (ಪಿಟಿಐ ಸಂಗ್ರಹ ಚಿತ್ರ)
ಲಾಲು ಪ್ರಸಾದ್ ಯಾದವ್ (ಪಿಟಿಐ ಸಂಗ್ರಹ ಚಿತ್ರ)   

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಜ್ವರಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಲಾಲು ಅವರು ಜ್ವರದಿಂದ ಬಳಲುತ್ತಿದ್ದಾರೆ. ಅವರನ್ನು ಶುಕ್ರವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಮೇವು ಹಗರಣಕ್ಕೆ ಸಂಬಂಧಿಸಿದ ಡುಮ್ಕಾ ಖಜಾನೆ ಪ್ರಕರಣದಲ್ಲಿ ಜಾರ್ಖಂಡ್‌ ಹೈಕೋರ್ಟ್ ಏಪ್ರಿಲ್‌ನಲ್ಲಿ ಲಾಲು ಅವರಿಗೆ ಜಾಮೀನು ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.