ADVERTISEMENT

ಮೇವು ಹಗರಣ| ಡೊರಂಡ ಖಜಾನೆ ಪ್ರಕರಣದಲ್ಲಿ ಲಾಲು ದೋಷಿ: ಸಿಬಿಐ ಕೋರ್ಟ್‌ ತೀರ್ಪು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಫೆಬ್ರುವರಿ 2022, 8:00 IST
Last Updated 15 ಫೆಬ್ರುವರಿ 2022, 8:00 IST
ಲಾಲು ಪ್ರಸಾದ್‌ ಯಾದವ್‌
ಲಾಲು ಪ್ರಸಾದ್‌ ಯಾದವ್‌   

ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಡೊರಂಡ ಖಜಾನೆ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರನ್ನು ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ಶಿಕ್ಷೆ ಪ್ರಮಾಣವನ್ನು ಕೋರ್ಟ್‌ ಫೆ. 18ರಂದು ಪ್ರಕಟಿಸಲಿದೆ. ಪ್ರಕರಣದ ವಿಚಾರಣೆಯನ್ನು ಜ. 29ರಂದೇ ಪೂರ್ಣಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಫೆ. 15ಕ್ಕೆ ನಿಗದಿ ಮಾಡಿತ್ತು.

ಈ ಪ್ರಕರಣದ ಇತರ 36ರ ಮಂದಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಲಾಗಿದೆ. ಲಾಲೂ ಅವರನ್ನು ದೋಷಿ ಎಂದು ಕೋರ್ಟ್‌ ಹೇಳಿದ್ದು, ಅವರ ಶಿಕ್ಷೆಯ ಪ್ರಮಾಣವನ್ನು ಇನ್ನಷ್ಟೇ ತಿಳಿಸಬೇಕಾಗಿದೆ ಎಂದು ಡೊರಂಡ ಖಜಾನೆ ಪ್ರಕರಣದ ಪ್ರತಿವಾದಿ ವಕೀಲ ಸಂಜಯ್‌ ಕುಮಾರ್‌ ತಿಳಿಸಿದ್ದಾರೆ.

ADVERTISEMENT

ಅವಿಭಜಿತ ಬಿಹಾರದಲ್ಲಿ ನಡೆದಿದ್ದ ₹950 ಕೋಟಿ ಮೊತ್ತದ ಮೇವು ಹಗರಣದಲ್ಲಿ, ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿತ್ತು. ಡೊರಂಡ ಜಿಲ್ಲಾ ಸರ್ಕಾರಿ ಖಜಾನೆಯಿಂದ ₹139 ಕೋಟಿಗಳನ್ನು ಅಕ್ರಮವಾಗಿ ಪಡೆಯಲಾಗಿತ್ತು.

ಇದೇಮೇವು ಹಗರಣದ ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಂದಹಣ ಪಡೆದುಕೊಂಡ ನಾಲ್ಕು ಪ್ರಕರಣಗಳಲ್ಲಿ ಲಾಲು ಅವರಿಗೆ ಈಗಾಗಲೇ 14 ವರ್ಷಗಳ ಜೈಲು ಶಿಕ್ಷೆ ಮತ್ತು ಒಟ್ಟು 60 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ. ಮೇವು ಹಗರಣದಲ್ಲಿ ಡೊರಂಡ ಐದನೇ ಪ್ರಕರಣ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.