ADVERTISEMENT

ಲಾಲೂ ಪ್ರಸಾದ್‌ಗೆ ‘ಸುಪ್ರೀಂ’ ನೋಟಿಸ್‌

ಪಿಟಿಐ
Published 14 ಫೆಬ್ರುವರಿ 2020, 18:05 IST
Last Updated 14 ಫೆಬ್ರುವರಿ 2020, 18:05 IST
ಲಾಲು ಪ್ರಸಾದ್‌ ಯಾದವ್‌ 
ಲಾಲು ಪ್ರಸಾದ್‌ ಯಾದವ್‌    

ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲೂ ಪ್ರಸಾದ್‌ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ನೋಟಿಸ್‌ ನೀಡಿದೆ.

ಮೇವು ಹಗರಣದ ಪ್ರಕರಣದ ಆರೋಪಿ ಲಾಲೂ ಪ್ರಸಾದ್‌ಗೆಜಾರ್ಖಂಡ್‌ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದಮುಖ್ಯನ್ಯಾಯಮೂರ್ತಿ ಎಸ್‌.ಎ. ಬೊಬಡೆ, ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಸೂರ್ಯಕಾಂತ್‌ ಅವರಿದ್ದ ನ್ಯಾಯಪೀಠವು, ಈ ಕುರಿತು ಪ್ರತಿಕ್ರಿಯಿಸಲು ಲಾಲೂ ಅವರಿಗೆ ನೋಟಿಸ್‌ ಜಾರಿಗೊಳಿಸಿದೆ.

ದಿಯೋಘರ್‌ ಖಜಾನೆಯಿಂದ ಅಕ್ರಮವಾಗಿ ₹89.27 ಲಕ್ಷ ಪಡೆದ ಪ್ರಕರಣದಲ್ಲಿ ಹೈಕೋರ್ಟ್‌ ಯಾದವ್‌ಗೆ ಜಾಮೀನು ನೀಡಿತ್ತು.ಹೈಕೋರ್ಟ್‌ ತೀರ್ಪು ಪ್ರಶ್ನಿಸಿ 2019 ಜು.12ರಂದು ಸಿಬಿಐ ಅರ್ಜಿ ಸಲ್ಲಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.