
ಪಿಟಿಐ
ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಕೇಂದ್ರದ ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಮತ್ತು ಅವರ ಪತ್ನಿ ರಾಬ್ಡಿ ದೇವಿ ವಿರುದ್ಧ ದೆಹಲಿ ನ್ಯಾಯಾಲಯವು ಸೋಮವಾರ ದೋಷಾರೋಪ ನಿಗದಿಪಡಿಸಿದೆ.
ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೊಗ್ನೆ ಅವರು, ಆರೋಪಿ 1 (ಲಾಲೂ) ಮತ್ತು ಆರೋಪಿ 2 (ರಾಬ್ರಿ) ವಿರುದ್ಧ ದೋಷಾರೋಪ ನಿಗದಿಪಡಿಸಲಾಗಿದೆ ಎಂದಿದ್ದಾರೆ.
ನ್ಯಾಯಾಲಯದ ದೋಷಾರೋಪವನ್ನು ಲಾಲೂ ದಂಪತಿ ನಿರಾಕರಿಸಿದ್ದು, ವಿಚಾರಣೆಗಾಗಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಫೆ. 27ರಂದು ವಿಚಾರಣೆಗೆ ಪಟ್ಟಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.