ADVERTISEMENT

Opposition Unity | ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವೆ: ಲಾಲು ಪ್ರಸಾದ್‌

ಪಿಟಿಐ
Published 6 ಜುಲೈ 2023, 11:10 IST
Last Updated 6 ಜುಲೈ 2023, 11:10 IST
ಲಾಲು ಪ್ರಸಾದ್‌
ಲಾಲು ಪ್ರಸಾದ್‌   

ಪಟ್ನಾ: ಈ ತಿಂಗಳ 17 ಮತ್ತು 18ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ತಿಳಿಸಿದ್ದಾರೆ.

ಪಟ್ನಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಕ್ತ ಪರೀಕ್ಷೆ ಸೇರಿದಂತೆ ನಿಯಮಿತವಾದ ವೈದ್ಯಕೀಯ ಪರೀಕ್ಷೆಗಾಗಿ ನವದೆಹಲಿಗೆ ತೆರಳುತ್ತಿದ್ದೇನೆ. ಅಲ್ಲಿಂದ ಪಟ್ನಾಗೆ ವಾಪಸಾಗುತ್ತೇನೆ. ಬಳಿಕ ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ತೆರಳಲಿದ್ದೇನೆ. 2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಸೋಲಿಸಲು ಕಾರ್ಯತಂತ್ರ ರೂಪಿಸಲಾಗುವುದು’ ಎಂದರು.

ಸಮಾನ ಮನಸ್ಕರ ವಿರೋಧ ಪಕ್ಷಗಳ ಮೊದಲ ಸಭೆ ಜೂನ್‌ 23ರಂದು ಪಟ್ನಾದಲ್ಲಿ ನಡೆದಿತ್ತು. ಎರಡನೇ ಸಭೆ ಜುಲೈ 17, 18ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.