ರಾಂಚಿ:ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ವರಿಷ್ಠ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ಚಿಕಿತ್ಸೆಗೆ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ಲಾಲು ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲು ಇಲ್ಲಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಆರ್‌ಐಎಂಎಸ್) ವೈದ್ಯಕೀಯ ವಿಭಾಗ ಶಿಫಾರಸು ಮಾಡಿದೆ.
‘ಲಾಲು ಅವರ ಆರೋಗ್ಯ ಪರಿಸ್ಥಿತಿಯು ಹದಗೆಟ್ಟಿರುವುದರಿಂದ ಅವರನ್ನು ಏಮ್ಸ್‌ಗೆ ದಾಖಲಿಸುವಂತೆ ವೈದ್ಯಕೀಯ ವಿಭಾಗವು ಶಿಫಾರಸು ಮಾಡಿದೆ. ಇದನ್ನು ಲಾಲು ಅವರಿದ್ದ ಜೈಲಿನ ಅಧೀಕ್ಷಕರಿಗೂ ರವಾನಿಸಲಾಗಿದೆ’ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ರಾಜೇಂದ್ರ ವೈದ್ಯಕೀಯ ಸಂಸ್ಥೆಯ ಏಳು ವೈದ್ಯರ ತಂಡದ ಮುಖ್ಯಸ್ಥ ಡಾ.ವಿದ್ಯಾಪತಿ ಪಿಟಿಐಗೆ ತಿಳಿಸಿದರು.
ಮೇವು ಹಗರಣದಲ್ಲಿ ಡೊರಾಂಡಾ ಖಜಾನೆಯಿಂದ ₹ 139 ಕೋಟಿ ಹಣ ದುರುಪಯೋಗ ಪ್ರಕರಣದಲ್ಲಿ ಆರೋಪಿಯಾಗಿದ್ದ ಲಾಲು ಪ್ರಸಾದ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಕಳೆದ ಫೆಬ್ರವರಿ 21 ರಂದು ಐದು ವರ್ಷಗಳ ಜೈಲು ಶಿಕ್ಷೆ ಮತ್ತು ₹ 60 ಲಕ್ಷ ದಂಡ ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.