
ಪಿಟಿಐ ಚಿತ್ರ
ಕಾನ್ಪುರ: ಉದ್ಯಮಿಯ ಮಗನೊಬ್ಬ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ಕಾರೊಂದು ಪಾದಚಾರಿ ಮಾರ್ಗದಲ್ಲಿ ನಿಂತಿದ್ದ ಜನರು ಹಾಗೂ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ರೆವ್ -3 ಮಾಲ್ ಬಳಿ ಈ ಘಟನೆ ನಡೆದಿದೆ.
ಆರೋಪಿಯನ್ನು ಉದ್ಯಮಿ ಕೆ.ಕೆ ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಎಂದು ಗುರುತಿಸಲಾಗಿದೆ.
ಮಿಶ್ರಾ ಚಲಾಯಿಸುತ್ತಿದ್ದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ನಿಯಂತ್ರಣ ತಪ್ಪಿ, ಪಾದಚಾರಿ ಮಾರ್ಗದಲ್ಲಿ ನಿಂತಿದ್ದ ವಾಹನಗಳಿಗೆ ಹಾಗೂ ಜನರಿಗೆ ಡಿಕ್ಕಿ ಹೊಡೆದಿದೆ. ಆರೋಪಿಯು ಸಹ ಅಪಘಾತದಲ್ಲಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ವೇಳೆ ಸ್ಥಳೀಯರು ಜಮಾಯಿಸಿ, ಕಾರನ್ನು ಸುತ್ತುವರೆದ ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಈ ವೇಳೆ ಆರೋಪಿಯ ಬೌನ್ಸರ್‌ಗಳು ಹಾಗೂ ಜನರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿ ಹಾಗೂ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.