
ಪಿಟಿಐ
ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಅವರ ಕುಟುಂಬ ಸದಸ್ಯರು ಮತ್ತು ಇತರರಿಗೆ ಸಂಬಂಧಿಸಿದ ‘ಉದ್ಯೋಗಕ್ಕಾಗಿ ಭೂಮಿ ಹಗರಣ’ದಲ್ಲಿ ದೋಷಾರೋಪ ನಿಗದಿಯನ್ನು ದೆಹಲಿ ನ್ಯಾಯಾಲಯ ಡಿಸೆಂಬರ್ 4ಕ್ಕೆ ಸೋಮವಾರ ಮುಂದೂಡಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್, ಅವರ ಪತ್ನಿ– ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ, ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಇತರರ ವಿರುದ್ಧ ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ.
ಲಾಲೂ ಅವರು ರೈಲ್ವೆ ಸಚಿವರಾಗಿದ್ದ 2004ರಿಂದ 2009ರ ವರೆಗಿನ ಸಮಯದಲ್ಲಿ ಮಧ್ಯಪ್ರದೇಶದ ಜಬಲ್ಪುರದಲ್ಲಿ ರೈಲ್ವೆ ಇಲಾಖೆಯ ಪಶ್ಚಿಮ ಮಧ್ಯ ವಲಯದ ಗ್ರೂಪ್–ಡಿ ವರ್ಗದ ನೇಮಕಾತಿಗಳನ್ನು ಮಾಡಲಾಗಿತ್ತು. ಈ ವೇಳೆ ನೇಮಕ ಆದವರು ಲಾಲೂ ಅವರ ಕುಟುಂಬದವರಿಗೆ ಮತ್ತು ಸಹಚರರಿಗೆ ಜಮೀನನ್ನು ಉಡುಗೊರೆಯಾಗಿ ನೀಡಿದ್ದರು ಎಂದು ಸಿಬಿಐ ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.