ADVERTISEMENT

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಮನವಿ ತಿರಸ್ಕರಿಸಿದ ‘ಸುಪ್ರೀಂ’

ಪಿಟಿಐ
Published 18 ಜುಲೈ 2025, 13:25 IST
Last Updated 18 ಜುಲೈ 2025, 13:25 IST
ಲಾಲು ಪ್ರಸಾದ್‌
ಲಾಲು ಪ್ರಸಾದ್‌   

ನವದೆಹಲಿ: ‘ಉದ್ಯೋಗಕ್ಕಾಗಿ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣದ ವಿಚಾರಣೆಗೆ ತಡೆ ನೀಡುವಂತೆ’ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಲ್ಲಿನ ಪ್ರಕ್ರಿಯೆಗಳಿಗೆ ತಡೆ ನೀಡುವಂತೆ ಕೋರಿ ಲಾಲು ಪ್ರಸಾದ್‌ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸಿಬಿಐನ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ತ್ವರಿತಗೊಳಿಸುವಂತೆ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್‌ ಮತ್ತು ಎನ್‌. ಕೋಟೇಶ್ವರ ಸಿಂಗ್‌ ಅವರಿದ್ದ ಪೀಠವು ದೆಹಲಿ ಹೈಕೋರ್ಟ್‌ಗೆ ಸೂಚಿಸಿತು.

ADVERTISEMENT

ಈ ಪ್ರಕರಣದಲ್ಲಿ, ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಖುದ್ದು ಹಾಜರಾತಿಯಿಂದ ಲಾಲು ಅವರಿಗೆ ಸುಪ್ರೀಂ ಕೋರ್ಟ್‌ ವಿನಾಯಿತಿ ನೀಡಿದೆ.

ಎಫ್‌ಐಆರ್‌ ರದ್ದುಗೊಳಿಸುವಂತೆ ಲಾಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಸಿಬಿಐಗೆ ನೋಟಿಸ್‌ ನೀಡಿದ್ದು, ಆಗಸ್ಟ್‌ 12ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.