ಕೊಯಮತ್ತೂರು/ಚೆನ್ನೈ: ಲಷ್ಕರ್ ಎ ತಯಬಾ (ಎಲ್‌ಇಟಿ) ಉಗ್ರರು ನುಸುಳಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಕಾರಣ ತಮಿಳುನಾಡಿನಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಕೊಯಮತ್ತೂರಿನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಮಿತ್ ಶರಣ್ ಹೇಳಿದ್ದಾರೆ.
ಎಲ್‌ಇಟಿಯ ಆರು ಮಂದಿ ಉಗ್ರರು ಶ್ರೀಲಂಕಾದಿಂದ ಕಡಲಿನ ಮಾರ್ಗವಾಗಿ ರಾಜ್ಯಕ್ಕೆ ನುಸುಳಿದ್ದು, ವಿವಿಧ ನಗರಗಳಿಗೆ ತೆರಳಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಬಂದಿರುವ ಕಾರಣ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಾದ್ಯಂತ ವಿಮಾನನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ ಮತ್ತು ಆರಾಧನಾಲಯಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.