ADVERTISEMENT

ಪುಲ್ವಾಮ ಎನ್‌ಕೌಂಟರ್‌ | ನಾಲ್ವರು ಉಗ್ರರ ಹತ್ಯೆಗೈದ ಭದ್ರತಾ ಪಡೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2019, 3:09 IST
Last Updated 7 ಜೂನ್ 2019, 3:09 IST
   

ಲಸಿಪೊರ(ಪುಲ್ವಾಮ):ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ವಲಯದಲ್ಲಿ ಭದ್ರತಾಪಡೆ ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.‌‌

ಹತ್ಯೆಯಾದ ಉಗ್ರರ ಬಳಿಇದ್ದ 3 ಎಕೆ ಸರಣಿಯ ರೈಫಲ್‌ಗಳನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಸ್ಥಳದಲ್ಲಿ ಅಡಗಿರುವ ಉಗ್ರರಿಗಾಗಿ ಶೋಧ ಮುಂದುವರಿದಿದೆ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್‌ಐ ವರದಿ ಮಾಡಿದೆ.

ADVERTISEMENT

ಆರಂಭದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದ ಭದ್ರತಾ ಪಡೆ ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮತ್ತೊಬ್ಬ ಉಗ್ರನನ್ನು ಹತ್ಯೆಗೈದಿದೆ. ಇದರೊಂದಿಗೆ ಇಂದು ನಾಲ್ವರು ಉಗ್ರರನ್ನು ಬಲಿ ಪಡೆದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.