ADVERTISEMENT

ಪಂಚಭೂತಗಳಲ್ಲಿ ಲೀನರಾದ 'ಗಾನ ಕೋಗಿಲೆ' ಲತಾ ಮಂಗೇಶ್ಕರ್‌ 

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2022, 14:23 IST
Last Updated 6 ಫೆಬ್ರುವರಿ 2022, 14:23 IST
ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಅಂತ್ಯಕ್ರಿಯೆ
ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಅಂತ್ಯಕ್ರಿಯೆ    

ಮುಂಬೈ: ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಭಾನುವಾರ ಸಂಜೆ ಪಂಚಭೂತಗಳಲ್ಲಿ ಲೀನರಾದರು.

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು.

ಇದಕ್ಕೂ ಮೊದಲು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯರು ಲತಾ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ADVERTISEMENT

ಲತಾ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಹೃದಯನಾಥ್ ಮಂಗೇಶ್ಕರ್ ಅವರ ಪುತ್ರ ಆದಿನಾಥ್ ಮಂಗೇಶ್ಕರ್ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.