ADVERTISEMENT

ದೆಹಲಿ: ಕೇಂದ್ರದ ಮಾಜಿ ಸಚಿವ ಪಿ.ಆರ್. ಕುಮಾರಮಂಗಲಂ ಪತ್ನಿಯ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜುಲೈ 2021, 5:41 IST
Last Updated 7 ಜುಲೈ 2021, 5:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೇಂದ್ರದ ಮಾಜಿ ಸಚಿವ,ದಿವಂಗತ ಪಿ.ಆರ್. ಕುಮಾರಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರಮಂಗಲಂ (67) ಅವರನ್ನು ಮಂಗಳವಾರ ರಾತ್ರಿ ದೆಹಲಿಯ ನಿವಾಸದಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆಯಲ್ಲಿ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ.

ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ವಸಂತ್ ವಿಹಾರದಲ್ಲಿ ಕಿಟ್ಟಿ ಕುಮಾರಮಂಗಲಂ ಒಬ್ಬಂಟಿಯಾಗಿದ್ದಾಗ ಅವರಿಗೆ ಕೆಲಸ ಮಾಡಿಕೊಡುತ್ತಿದ್ದ ಧೋಬಿಯು ದರೋಡೆ ಮಾಡುವ ಉದ್ದೇಶದಿಂದ ಮತ್ತಿಬ್ಬರ ಸಹಾಯದಿಂದ ಮನೆಯೊಳಗೆ ನುಗ್ಗಿದ್ದಾನೆಎಂದು ಪೊಲೀಸರು ತಿಳಿಸಿದ್ದಾರೆ.

ಕಿಟ್ಟಿ ಕುಮಾರಮಂಗಲಂ ಅವರ ಸಹಾಯಕಿಯನ್ನು ಕೋಣೆಯೊಳಗೆ ಕಟ್ಟಿ ಹಾಕಿದ ಬಳಿಕ ಆಕೆಯ ಮೇಲೆ ಹಲ್ಲೆ ಮಾಡಿ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿ 11ರ ವೇಳೆಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಬಳಿಕ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇತರೆ ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.