ADVERTISEMENT

ದೆಹಲಿ | ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಕೇಜ್ರಿವಾಲ್

ಪಿಟಿಐ
Published 8 ಡಿಸೆಂಬರ್ 2024, 13:01 IST
Last Updated 8 ಡಿಸೆಂಬರ್ 2024, 13:01 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಮಾಜಿ ಮುಖ್ಯಮಂತ್ರಿ, ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಇಂದು (ಭಾನುವಾರ) ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಒಂದು ವೇಳೆ ದೆಹಲಿ ಪೊಲೀಸ್ ಮೇಲೆ ನಮ್ಮ ಸರ್ಕಾರದ ನಿಯಂತ್ರಣ ಇರುತ್ತಿದ್ದರೆ ಪರಿಸ್ಥಿತಿ ಭಿನ್ನವಾಗಿರುತ್ತಿತ್ತು ಎಂದು ಅವರು ಹೇಳಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರೋಲ್ ಭಾಗ್‌ನಲ್ಲಿ ಪಾದಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ಜನರಿಗೆ ಸುರಕ್ಷತೆ ಖಚಿತಪಡಿಸಿಕೊಳ್ಳಲು ಸಾರ್ವಜನಿಕ ಆಂದೋಲನ ಪ್ರಾರಂಭಿಸುವುದಾಗಿ ತಿಳಿಸಿದರು.

'ದೆಹಲಿ ಪೊಲೀಸ್ ನಮ್ಮ ನಿಯಂತ್ರಣದಲ್ಲಿಲ್ಲ. ಇಲ್ಲವಾದ್ದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ಇಷ್ಟೊಂದು ಹದಗೆಡುತ್ತಿರಲಿಲ್ಲ. ಶಾಲೆ, ಆಸ್ಪತ್ರೆ, ನೀರು ಹಾಗೂ ವಿದ್ಯುತ್ ಸಮಸ್ಯೆ ಬಗೆಹರಿಸಿದಂತೆ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಬಗೆಹರಿಸುತ್ತಿದ್ದೆ' ಎಂದು ಅವರು ಹೇಳಿದ್ದಾರೆ.

ನಗರದ ಪ್ರತಿಯೊಬ್ಬ ಮಹಿಳೆಗೆ ₹1000 ಗೌರವಧನ ನೀಡುವ ಯೋಜನೆಯನ್ನು ಎಎಪಿ ಶೀಘ್ರವೇ ಆರಂಭಿಸಲಿದೆ ಎಂದು ಅವರು ಮಾಹಿತಿ ನೀಡಿದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆ ಫೆಬ್ರುವರಿಯಲ್ಲಿ ನಡೆಯುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.