
ನವದೆಹಲಿ (ಪಿಟಿಐ): ದೆಹಲಿಯಲ್ಲಿ ಇತ್ತೀಚೆಗೆ ನಡೆದ ಎರಡು ಗುಂಡಿನ ದಾಳಿಗಳಲ್ಲಿ ಭಾಗಿಯಾಗಿದ್ದ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಇಬ್ಬರು ಶೂಟರ್‌ಗಳನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಆರೋಪಿಗಳು ದೆಹಲಿಯ ಎರಡು ಸ್ಥಳಗಳಲ್ಲಿ ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಗುಂಡು ಹಾರಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
‘ಆರೋಪಿಗಳೆಂದು ಗುರುತಿಸಲಾದ ದೀಪಕ್ ಮತ್ತು ಬಾಲಕನೊಬ್ಬನನ್ನು ಉತ್ತರ ದೆಹಲಿಯಲ್ಲಿ ಬಂಧಿಸಲಾಗಿದೆ. ಈ ವೇಳೆ ಆರೋಪಿಗಳು ಪೊಲೀಸರತ್ತ ಗುಂಡಿನ ದಾಳಿ ನಡೆಸಿದ್ದು, ಹಾಗಾಗಿ ಪೊಲೀಸರ ಕಡೆಯಿಂದ ಸಣ್ಣ ಎನ್‌ಕೌಂಟರ್ ನಡೆದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳಿಂದ ಎರಡು ಪಿಸ್ತೂಲ್‌ಗಳು ಮತ್ತು ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿಯ ವೇಳೆ ಕಾನ್‌ಸ್ಟೆಬಲ್ ಒಬ್ಬರು ಗುಂಡು ನಿರೋಧಕ ಜಾಕೆಟ್ ಧರಿಸಿದ್ದರಿಂದ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಆರೋಪಿಗಳಿಬ್ಬರೂ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿಯ ನಿಕಟವರ್ತಿ ರಣದೀಪ್ ಮಲಿಕ್ ಸೇರಿದಂತೆ ವಿದೇಶಿ ಮೂಲದ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದು, ಇಬ್ಬರೂ ಸುಲಿಗೆಗಾಗಿ ಗುಂಡು ಹಾರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.