ಚಂಡೀಗಢ : ಪಂಜಾಬಿನ ಪಟಿಯಾಲ-ಅಂಬಾಲ ಹೆದ್ದಾರಿಯ ಶಂಭು ಗ್ರಾಮದ ಸಮೀಪದಲ್ಲಿ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭಾಗಿಯಾಗಿದ್ದ ಇಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಇವರು ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದೆನ್ನಲಾಗಿದೆ.
ಬಂಧಿತರಿಂದ 9 ಎಂಎಂ ಗ್ಲಾಕ್ ಪಿಸ್ತೂಲ್ ಹಾಗೂ 6 ಜೀವಂತ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪಂಜಾಬ್ ನ ಆ್ಯಂಟಿ ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್ ನಡೆಸಿದ ಕಾರ್ಯಾಚರಣೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಇಬ್ಬರನ್ನು ಪಟಿಯಾಲ-ಅಂಬಾಲ ಹೆದ್ದಾರಿಯ ಶಂಭು ಗ್ರಾಮದ ಸಮೀಪದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಹೇಳಿದ್ದಾರೆ.
ಕೃತ್ಯ ಎಸಗಿದ ನಂತರ ಇವರು ನೇಪಾಳಕ್ಕೆ ಪರಾರಿಯಾಗಿ ತಲೆ ಮರೆಸಿಕೊಂಡಿದ್ದರು. ಆದರೆ ವಿದೇಶಿ ಮೂಲದ ವ್ಯಕ್ತಿಯ ನಿರ್ದೇಶನ ಮೇರೆಗೆ ಅಪರಾಧ ನಡೆಸಲು ಇವರು ಪಂಜಾಬ್‌ಗೆ ಮರಳಿದ್ದರು ಎಂಬುದನ್ನು ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯಲ್ಲಿ ಪತ್ತೆ ಮಾಡಿದ್ದಾರೆ.
ಇಬ್ಬರು ಆರೋಪಿಗಳ ವಿರುದ್ದ ಪಂಜಾಬ್, ದೆಹಲಿ, ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಕ್ರಿಮಿನಲ್ ಕಾಯ್ದೆಗಳ ಅಡಿ 15 ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.
ಫಜಿಲ್ಕಾದಲ್ಲಿ ಇತ್ತೀಚೆಗೆ ನಡೆದ ಭರತ್ ರತನ್ ಅಲಿಯಾಸ್ ವಿಕ್ಕಿಯ ಕೊಲೆಯಲ್ಲೂ ಇವರ ಕೈವಾಡವಿರಬಹುದು ಎಂದು ಪೊಲೀಸ್ ಮಹಾನಿರ್ದೇಶಕರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.