ADVERTISEMENT

‘ಕಾಶ್ಮೀರ: ಬಂಧಿತ ಮುಖಂಡರ ಬಿಡುಗಡೆಗೆ ಆಗ್ರಹ

ವಿವಿಧ ಪಕ್ಷಗಳ ಮುಖಂಡರ ಒಕ್ಕೊರಲಿನ ಮನವಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 21:25 IST
Last Updated 9 ಮಾರ್ಚ್ 2020, 21:25 IST
ಎಚ್‌.ಡಿ. ದೇವೇಗೌಡ
ಎಚ್‌.ಡಿ. ದೇವೇಗೌಡ   

ನವದೆಹಲಿ: ಕಾಶ್ಮೀರಕ್ಕೆ ವಿಶೇಷ ಸ್ಥಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಗೃಹಬಂಧನದಲ್ಲಿ ಇರಿಸಲಾಗಿರುವ ಮೂವರು ಮಾಜಿ ಮುಖ್ಯಮಂತ್ರಿಗಳು ಹಾಗೂ ಇತರ ರಾಜಕೀಯ ಮುಖಂಡರ ಶೀಘ್ರ ಬಿಡುಗಡೆಗೆ ಪ್ರಮುಖ ಪಕ್ಷಗಳ ಮುಖಂಡರು ಆಗ್ರಹಿಸಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್, ಸಿಪಿಎಂ ಮತ್ತು ಸಿಪಿಐ ನ ಸೀತಾರಾಮ್‌ ಯೆಚೂರಿ, ಡಿ.ರಾಜಾ, ಆರ್‌ಜೆಡಿಯ ಮನೋಜ್‌ ಕುಮಾರ್‌ ಝಾ, ಕೇಂದ್ರದ ಮಾಜಿ ಸಚಿವರಾದ ಯಶವಂತ ಸಿನ್ಹಾ, ಹಾಗೂ ಅರುಣ್‌ ಶೌರಿ ಅವರು ಸೋಮವಾರ ಜಂಟಿ ಪ್ರಕಟಣೆಯಲ್ಲಿ ಈ ಕುರಿತು ಒತ್ತಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಡಾ.ಫರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರನ್ನು ಏಳು ತಿಂಗಳಿಂದ ಗೃಹ ಬಂಧನದಲ್ಲಿ ಇರಿಸಿರುವ ಕೇಂದ್ರ ಸರ್ಕಾರದ ಕ್ರಮವು ಮೂಲಭೂತ ಹಕ್ಕುಗಳು ಮತ್ತು ನಾಗರಿಕ ಸ್ವಾತಂತ್ರ್ಯಗಳ ಮೇಲಿನ ಹಲ್ಲೆಯಾಗಿದೆ ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.