ADVERTISEMENT

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ: ತನಿಖೆಗೆ ಆಗ್ರಹ

ದೇಶದ್ರೋಹಕ್ಕೆ ಸಮಾನ: ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಎ.ಕೆ. ಆ್ಯಂಟನಿ

ಪಿಟಿಐ
Published 20 ಜನವರಿ 2021, 10:09 IST
Last Updated 20 ಜನವರಿ 2021, 10:09 IST
ಎ.ಕೆ. ಆ್ಯಂಟನಿ
ಎ.ಕೆ. ಆ್ಯಂಟನಿ   

ನವದೆಹಲಿ: ಸೇನಾ ಕಾರ್ಯಾಚರಣೆಯ ರಹಸ್ಯ ಮಾಹಿತಿ ಸೋರಿಕೆ ಮಾಡುವುದು ದೇಶದ್ರೋಹವಾಗಿದೆ. ಇಂತಹ ಪ್ರಕರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಬೇಕು ಎಂದು ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಎ.ಕೆ. ಆ್ಯಂಟನಿ ಆಗ್ರಹಿಸಿದ್ದಾರೆ.

ರಿಪಬ್ಲಿಕ್‌ ಟಿ.ವಿ. ಸಂಪಾದಕ ಅರ್ನಬ್‌ ಗೋಸ್ವಾಮಿ ಮತ್ತು ಬ್ರಾಡ್‌ಕಾಸ್ಟ್‌ ಆಡಿಯನ್ಸ್‌ ರಿಸರ್ಚ್‌ ಕೌನ್ಸಿಲ್‌ನ ಸಿಇಒ ಪಾರ್ಥೊ ದಾಸ್‌ಗುಪ್ತಾ ನಡುವೆ ನಡೆದಿದೆ ಎನ್ನಲಾದ ವಾಟ್ಸ್ಆ್ಯಪ್‌ ಚಾಟ್‌ ಅನ್ನು ಪ್ರಸ್ತಾಪಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

2019ರಲ್ಲಿ ನಡೆದ ವಾಯು ದಾಳಿಯ ಬಗ್ಗೆ ಮಾಹಿತಿ ಸೋರಿಕೆಯಾದ ಕುರಿತು ಸರ್ಕಾರ ತಕ್ಷಣವೇ ತನಿಖೆಗೆ ಆದೇಶಿಸಬೇಕು ಎಂದು ಅವರು ಬುಧವಾರ ಒತ್ತಾಯಿಸಿದ್ದಾರೆ.

ADVERTISEMENT

ಇದು ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಾಗಿದವರಿಗೆ ಶಿಕ್ಷೆಯಾಗಬೇಕು ಮತ್ತು ಅಂತಹವರನ್ನು ಕ್ಷಮಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.

2019ರ ಫೆಬ್ರುವರಿ 26ರಂದು ಪಾಕಿಸ್ತಾನ ಬಾಲಾಕೋಟ್‌ನಲ್ಲಿ ಜೈಷ್‌–ಇ–ಮೊಹಮ್ಮದ್‌ ಉಗ್ರಗಾಮಿ ಸಂಘಟನೆಯ ತರಬೇತಿ ಶಿಬಿರಗಳ ಮೇಲೆ ಭಾರತ ವಾಯು ದಾಳಿ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.