ADVERTISEMENT

ಡಿ.8ರ ‘ಭಾರತ್‌ ಬಂದ್‌‘ಗೆ ಎಡ ಪಕ್ಷಗಳ ಬೆಂಬಲ

ಪಿಟಿಐ
Published 5 ಡಿಸೆಂಬರ್ 2020, 8:14 IST
Last Updated 5 ಡಿಸೆಂಬರ್ 2020, 8:14 IST
ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಹೊರಟಿರುವ ರೈತರನ್ನು ತಡೆಯಲು ಶನಿವಾರ ಉತ್ತರ ಪ್ರದೇಶದ ಗಡಿಭಾಗ ಘಾಜಿಪುರ ಹೆದ್ದಾರಿಯನ್ನು ಬಂದ್ ಮಾಡಿರುವ ದೃಶ್ಯ.
ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಹೊರಟಿರುವ ರೈತರನ್ನು ತಡೆಯಲು ಶನಿವಾರ ಉತ್ತರ ಪ್ರದೇಶದ ಗಡಿಭಾಗ ಘಾಜಿಪುರ ಹೆದ್ದಾರಿಯನ್ನು ಬಂದ್ ಮಾಡಿರುವ ದೃಶ್ಯ.   

ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ವಿವಿಧ ರೈತಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ಎಡ ಪಕ್ಷಗಳು, ಇದೇ ಸಂಘಟನೆಗಳು ಡಿ.8ರಂದು ಕರೆ ನೀಡಿರುವ ‘ಭಾರತ್‌ ಬಂದ್‌‘ಗೂ ತಮ್ಮ ಬೆಂಬಲವನ್ನು ವಿಸ್ತರಿಸಿವೆ.

ರಾಷ್ಟ್ರವ್ಯಾಪಿ ರೈತರ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್‌), ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಅಖಿಲ ಭಾರತ ಫಾರ್ವರ್ಡ್‌ ಬ್ಲಾಕ್‌ ಪಕ್ಷಗಳು ಶುಕ್ರವಾರ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

‘ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೇಶದಾದ್ಯಂತ ರೈತ ಸಂಘಟನೆಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಎಡಪಕ್ಷಗಳು ಬೆಂಬಲ ವ್ಯಕ್ತಪಡಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುತ್ತಿವೆ. ಡಿ.8ರಂದು ಕರೆ ನೀಡಿರುವ ಭಾರತ್‌ ಬಂದ್‌ಗೂ ತಮ್ಮ ಬೆಂಬಲವನ್ನು ವಿಸ್ತಿರಿಸಿವೆ‘ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.