ರಾಂಚಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಆರು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು ಇತರ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಹೋರಾಡಲಿದೆ ಎಂದು ಸಿಪಿಐ(ಎಂ)ನ ಹಿರಿಯ ನಾಯಕಿ ಬೃಂದಾ ಕಾರಟ್ ಹೇಳಿದ್ದಾರೆ.
ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸಿಸ್ಟ್) ಎಂಟನೇ ಜಾರ್ಖಂಡ್ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿರುವ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ನಾವು ಸ್ಪರ್ಧೆ ಮಾಡುತ್ತಿರುವ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕೇತ್ರಗಳಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಪಕ್ಷ ತೀರ್ಮಾನಿಸಿದೆ ಎಂದು ಹೇಳಿದರು.
ದೇಶದ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಬೃಂದಾ ಕಾರಟ್ ಹೇಳಿದರು.
70 ಸ್ಥಾನಗಳಿರುವ ದೆಹಲಿ ವಿಧಾನಸಭಾಗೆ ಫೆಬ್ರವರಿ 5ರಂದು ಮತದಾನ ಜರುಗಲಿದೆ. ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.