ADVERTISEMENT

ಲೇಹ್‌ ಬಂದ್‌ ಹಿಂಸಾಚಾರ | ನಾಲ್ವರ ಸಾವು: 30 ಮಂದಿಗೆ ಗಾಯ

ಪಿಟಿಐ
Published 24 ಸೆಪ್ಟೆಂಬರ್ 2025, 13:25 IST
Last Updated 24 ಸೆಪ್ಟೆಂಬರ್ 2025, 13:25 IST
<div class="paragraphs"><p>ಲೇಹ್‌ ಬಂದ್‌ ಸಂದರ್ಭದಲ್ಲಿ ದುಷ್ಕರ್ಮಿಗಳು ಕಟ್ಟಡವೊಂದಕ್ಕೆ ಬೆಂಕಿ ಇಟ್ಟಿದ್ದರಿಂದ ದಟ್ಟ ಹೊಗೆ ಆವರಿಸಿತ್ತು</p></div>

ಲೇಹ್‌ ಬಂದ್‌ ಸಂದರ್ಭದಲ್ಲಿ ದುಷ್ಕರ್ಮಿಗಳು ಕಟ್ಟಡವೊಂದಕ್ಕೆ ಬೆಂಕಿ ಇಟ್ಟಿದ್ದರಿಂದ ದಟ್ಟ ಹೊಗೆ ಆವರಿಸಿತ್ತು

   

–ಪಿಟಿಐ ಚಿತ್ರ

ಲೇಹ್‌ : ಲೇಹ್‌ ಬಂದ್‌ ವೇಳೆ ಪ್ರತಿಭಟನಕಾರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಬುಧವಾರ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿದ್ದಾರೆ.

ADVERTISEMENT

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಲೇಹ್‌ನಲ್ಲಿ ಬುಧವಾರ ಬಂದ್‌ಗೆ ಕರೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಕಾರರು ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಿದರು, ಹಲವು ವಾಹನಗಳನ್ನು ಜಖಂಗೊಳಿಸಿದರು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಗೋಲಿಬಾರ್‌ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದರು.

 ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿಯೇ ನಾಲ್ವರು ಮೃತಪಟ್ಟಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಲೇಹ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆ ವೇಳೆ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿ

ಲಡಾಖ್‌ ಉತ್ಸವ ರದ್ದು
ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಸಂಘರ್ಷ ಉಲ್ಬಣಗೊಂಡ ಕಾರಣ ಲಡಾಖ್‌ ಉತ್ಸವದ ಕೊನೆಯ ದಿನದ ಕಾರ್ಯಕ್ರಮಗಳು ರದ್ದುಗೊಂಡಿವೆ. ಉತ್ಸವವು ಭಾನುವಾರದಿಂದ ಆರಂಭಗೊಂಡಿದ್ದು ಸಮಾರೋಪ ಸಮಾರಂಭದಲ್ಲಿ  ಲೆಫ್ಟಿನೆಂಟ್‌ ಗವರ್ನರ್‌ ಕವಿಂದರ್‌ ಗುಪ್ತಾ ಅವರು ಪಾಲ್ಗೊಳ್ಳಬೇಕಿತ್ತು. ‘ಅನಿವಾರ್ಯ ಕಾರಣಗಳಿಂದ ಲಡಾಖ್‌ ಉತ್ಸವದ ಸಮಾರೋಪ ಸಮಾರಂಭವನ್ನು ರದ್ದು ಮಾಡಲಾಗಿದೆ’ ಎಂದು ಆಡಳಿತ ವ್ಯವಸ್ಥೆ ಘೋಷಿಸಿದೆ. ‘ಸ್ಥಳೀಯ ಕಲಾವಿದರು ಸಾಂಸ್ಕೃತಿಕ ತಂಡಗಳು ಪ್ರವಾಸಿಗರು ಮತ್ತು ಲಡಾಖ್‌ ಜನತೆಗೆ ಉಂಟಾದ ಅನನುಕೂಲಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.