ADVERTISEMENT

Ladakh violence | ಲೇಹ್‌ನಲ್ಲಿ ಕರ್ಫ್ಯೂ: ಭದ್ರತೆ ಬಿಗಿ, 50 ಮಂದಿ ವಶಕ್ಕೆ

ಪಿಟಿಐ
Published 25 ಸೆಪ್ಟೆಂಬರ್ 2025, 5:53 IST
Last Updated 25 ಸೆಪ್ಟೆಂಬರ್ 2025, 5:53 IST
<div class="paragraphs"><p>ಲೇಹ್‌ನಲ್ಲಿ ಕರ್ಫ್ಯೂ</p></div>

ಲೇಹ್‌ನಲ್ಲಿ ಕರ್ಫ್ಯೂ

   

ಪಿಟಿಐ ಚಿತ್ರ

ಲೇಹ್: ಹಿಂಸಾಚಾರ ಪೀಡಿತ ಲೇಹ್‌ ಲಡಾಖ್‌ನಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಈವರೆಗೆ ಪೊಲೀಸರು ಮತ್ತು ಅರೆಸೇನಾ ಪಡೆ ಕನಿಷ್ಠ 50 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ರಾಜ್ಯ ಸ್ಥಾನಮಾನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಲೇಹ್‌ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನಾಲ್ವರು ಮೃತಪಟ್ಟಿದ್ದು, 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಘಟನೆಯ ಬಳಿಕ ಕರ್ಫ್ಯೂ ವಿಧಿಸಲಾಗಿತ್ತು.

ಕಾರ್ಗಿಲ್ ಸೇರಿದಂತೆ ಇತರ ಪ್ರಮುಖ ಪಟ್ಟಣಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದ ಕಟ್ಟುನಿಟ್ಟಿನ ನಿಷೇಧಾಜ್ಞೆ ವಿಧಿಸಲಾಗಿದೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಹಿಂಸಾಚಾರದಲ್ಲಿ ಭಾಗಿಯಾಗಿದ್ದ 50 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಗುರುವಾರ ಪಿಟಿಐಗೆ ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.