ADVERTISEMENT

ಕೋವಿಡ್‌: ಶೇ 2ಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ಸೋಂಕು

ಪಿಟಿಐ
Published 18 ಮೇ 2021, 14:38 IST
Last Updated 18 ಮೇ 2021, 14:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಭಾರತದಲ್ಲಿ ಇದುವರೆಗೆ ಒಟ್ಟು ಜನಸಂಖ್ಯೆಯ ಶೇ 2ಕ್ಕಿಂತಲೂ ಕಡಿಮೆ ಜನರು ಕೊರೊನಾ ಸೋಂಕಿಗೀಡಾಗಿದ್ದು, ಉಳಿದ ಶೇ 98ರಷ್ಟು ಜನರು ಸೋಂಕಿಗೆ ಒಳಗಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

‘ಇಲ್ಲಿಯವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ವರದಿಯಾಗಿದ್ದರೂ, ಇದರ ಪ್ರಮಾಣ ಒಟ್ಟು ಜನಸಂಖ್ಯೆಯ ಶೇ 2ಕ್ಕಿಂತಲೂ ಕಡಿಮೆ. ಅಂದರೆ ಶೇ 1.8ರಷ್ಟು ಜನರು ಮಾತ್ರ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ’ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್‌ವಾಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT