ADVERTISEMENT

ಪುಲ್ವಾಮ: ಎಲ್‌ಇಟಿ ಉಗ್ರನ ಹತ್ಯೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2022, 13:57 IST
Last Updated 15 ಮಾರ್ಚ್ 2022, 13:57 IST
   

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೋರಾದಲ್ಲಿ ಮಂಗಳವಾರ ಭದ್ರತಾ ಪಡೆಗಳು ಲಷ್ಕರ್‌–ಎ–ತೈಬಾ (ಎಲ್‌ಇಟಿ) ಉಗ್ರನೊಬ್ಬನನ್ನು ಹತ್ಯೆ ಮಾಡಿವೆ.

ಸುಭಾನ್‌ಪೋರಾ ನಿವಾಸಿ ಓವೈಸ್‌ ರಾಜಾ ಹತ್ಯೆಯಾದ ಉಗ್ರ.

‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಭದ್ರತಾ ಪಡೆಗಳು ಶಂಕಿತ ಸ್ಥಳದ ಕಡೆಗೆ ಸಾಗುತ್ತಿದ್ದಂತೆ ಅಡಗಿಕೊಂಡಿದ್ದ ಉಗ್ರ ಮೇಲೆ ಮನಬಂದಂತೆ ಗುಂಡು ಹಾರಿಸಿದ. ಈ ವೇಳೆ ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಗೆ ಉಗ್ರ ಹತ್ಯೆಯಾದ’ ಎಂದು ಪೊಲೀಸ್‌ ವಕ್ತಾರರು ತಿಳಿಸಿದರು.

‘ಹತ್ಯೆಯಾದ ಉಗ್ರ ಎಲ್‌ಇಟಿ ಸಂಘಟನೆಗೆ ಸೇರಿದವನಾಗಿದ್ದು, ಪೊಲೀಸ್‌ ಹಾಗೂ ಭದ್ರತಾ ಪಡೆಗಳ ಮೇಲಿನ ಹಲವು ಭಯೋತ್ಪಾದನಾ ದಾಳಿಗಳಲ್ಲಿ ಭಾಗಿಯಾಗಿದ್ದ. ಉಗ್ರನಿಂದ ಎಕೆ–56 ರೈಫಲ್‌, ಮೂರು ಎಕೆ ಮ್ಯಾಗಜೀನ್‌, 80 ಎಕೆ ರೈಫಲ್‌ ಗುಂಡುಗಳು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.