ADVERTISEMENT

ಎಎಪಿ ಸರ್ಕಾರದ ಆದೇಶ ರದ್ದುಪಡಿಸಿದ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್ ಬೈಜಲ್

ಪಿಟಿಐ
Published 8 ಜೂನ್ 2020, 14:50 IST
Last Updated 8 ಜೂನ್ 2020, 14:50 IST
ಕೇಜ್ರಿವಾಲ್ ಜತೆ ಅನಿಲ್ ಬೈಜಲ್
ಕೇಜ್ರಿವಾಲ್ ಜತೆ ಅನಿಲ್ ಬೈಜಲ್    

ನವದೆಹಲಿ: ‘ರಾಷ್ಟ್ರ ರಾಜಧಾನಿಯಲ್ಲಿರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳನ್ನು ಸ್ಥಳೀಯರಿಗೆ ಮೀಸಲಿಡಬೇಕು’ ಎಂದು ದೆಹಲಿ ಎಎಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್ ಬೈಜಲ್ ರದ್ದುಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೆಫ್ಟಿನೆಂಟ್ ಗವರ್ನರ್ ಅವರು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರೂ ಆಗಿದ್ದಾರೆ. ಗವರ್ನರ್ ಅವರ ಈ ನಡೆಯು ಎಎಪಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ನಡುವೆ ವಾಗ್ವಾದಕ್ಕೆ ಕಾರಣವಾಗಬಹುದು ಎನ್ನಲಾಗಿದೆ.

‘ಕೊರೊನಾ ವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ದೆಹಲಿ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ನಡೆಸುತ್ತಿರುವ ಆಸ್ಪತ್ರೆಗಳು ದೆಹಲಿಯವರಿಗೆ ಮಾತ್ರ ಚಿಕಿತ್ಸೆ ನೀಡಲಿವೆ’ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದರು.

ADVERTISEMENT

ದೆಹಲಿಯಲ್ಲಿ ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಕೋವಿಡ್‌–19ರೊಂದಿಗೆ ಹೋರಾಡಲು ಆಸ್ಪತ್ರೆಗಳ ಒಟ್ಟಾರೆ ಸಿದ್ಧತೆ ಕುರಿತು ಮಾರ್ಗದರ್ಶನ ನೀಡಲು ದೆಹಲಿ ಸರ್ಕಾರವು ಐವರು ಸದಸ್ಯರ ಸಮಿತಿಯನ್ನು ನೇಮಿಸಿತ್ತು.

ಈ ಸಮಿತಿಯ ವರದಿ ಮೇರೆಗೆ ‘ದೆಹಲಿಯ ಆಸ್ಪತ್ರೆಗಳು ಇತರ ರಾಜ್ಯಗಳ ಜನರಿಂದ ತುಂಬಿ ತುಳುಕುವುದನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು’ ಎಂದು ಕೇಜ್ರಿವಾಲ್ ಸಮರ್ಥಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.