ಶ್ರೀನಗರ: ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಬಗ್ಗೆ ಚರ್ಚಿಸಲು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಏ.28ರಂದು ವಿಧಾನಸಭೆಯ ಒಂದು ದಿನದ ವಿಶೇಷ ಅಧಿವೇಶನ ಕರೆದಿದ್ದಾರೆ.
ಭಯೋತ್ಪಾದಕರ ದಾಳಿಯಲ್ಲಿ ಹಲವರು ಮೃತಪಟ್ಟಿರುವ ಬಗ್ಗೆ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಶೇಷ ಅಧಿವೇಶನ ಕರೆಯುವಂತೆ ಲೆಫ್ಟಿನೆಂಟ್ ಗವರ್ನರ್‌ಗೆ ಸಲಹೆ ಮಾಡಲು ಜಮ್ಮು–ಕಾಶ್ಮೀರ ಸಂಪುಟವು ಬುಧವಾರ ನಿರ್ಧರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.