ADVERTISEMENT

ರಫೇಲ್ ಒಪ್ಪಂದ: ರಾಹುಲ್ ಮೇಲೆ ಮುಗಿಬಿದ್ದ ಬಿಜೆಪಿ

ಬಿಜೆಪಿ ನಾಯಕರಿಂದ ದೇಶದ ವಿವಿಧೆಡೆ ಪತ್ರಿಕಾಗೋಷ್ಠಿ

ಪಿಟಿಐ
Published 17 ಡಿಸೆಂಬರ್ 2018, 14:59 IST
Last Updated 17 ಡಿಸೆಂಬರ್ 2018, 14:59 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ    

ನವದೆಹಲಿ:ರಫೇಲ್ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತಿರುಗಿಬಿದ್ದಿದೆ.

ರಫೇಲ್ ವಿಚಾರದಲ್ಲಿ ರಾಹುಲ್ ಸಂಸತ್ತಿನ ಮತ್ತು ದೇಶದ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಸಂಬಂಧಕೇಂದ್ರ ಸರ್ಕಾರದ ಹಲವು ಸಚಿವರು ಇಂದು ದೇಶದ ಹಲವೆಡೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ.ಮುಂಬೈನಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್,ಕೋಲ್ಕತ್ತದಲ್ಲಿ ಸಚಿವೆ ಸಮೃತಿ ಇರಾನಿ, ಲಖನೌನಲ್ಲಿ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ಪುಣೆಯಲ್ಲಿ ಬಿಜೆಪಿ ಸಂಸದ ಪೂನಂ ಮಹಾಜನ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

‘ನಾವು ವಿಮಾನಗಳ ಬೆಲೆ ಮಾಹಿತಿಯನ್ನು ಸಿಎಜಿಗೆ ನೀಡಿದ್ದೇವೆ. ಅದನ್ನು ಪರಿಶೀಲಿಸಿ ಸಿಎಜಿ ವರದಿ ಸಿದ್ಧಪಡಿಸಲಿದೆ. ಅದನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ನೀಡಲಾಗುತ್ತದೆ. ಈ ಪ್ರಕ್ರಿಯೆ ಆರಂಭವಾಗಿದೆ. ಇದನ್ನೇ ನಾವು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದೆವು. ಆದರೆ ಅದನ್ನು ತಪ್ಪಾಗಿ ಅರ್ಥೈಸಲಾಗಿದೆ. ಅದನ್ನು ಸರಿಪಡಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದೇವೆ’ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.