ಪಟ್ನಾ: ಬಿಹಾರದಲ್ಲಿ ಭಾನುವಾರ ಭಾರಿ ಮಳೆಯಾಗಿದ್ದು, ಸಿಡಿಲಿನಿಂದಾಗಿ ಹತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಡಿಲಿನಿಂದ ಮೃತಪಟ್ಟವರಬಗ್ಗೆ ದುಃಖ ವ್ಯಕ್ತಪಡಿಸಿರುವ ಬಿಹಾರಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಮೃತರ ಕುಟುಂಬಕ್ಕೆ ತಲಾ ₹ 4ಲಕ್ಷ ಪರಿಹಾರ ಘೋಷಿಸಿದ್ದಾರೆ.
ಪುರ್ನಿಯಾದಲ್ಲಿ ಮೂವರು, ಬೇಗುಸುರಾಯ್‌ನಲ್ಲಿ ಇಬ್ಬರು, ಪಟ್ನಾ, ಸಹರ್ಸಾ, ಪೂರ್ವ ಚಂಪಾರಣ್, ಮಾಧೇಪುರ್ ಮತ್ತು ದರ್ಭಾಂಗ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬಿಹಾರದಲ್ಲಿ ಮೂರು ವಾರಗಳಲ್ಲಿ ಸಿಡಿಲಿನಿಂದಾಗಿ 160ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.