ADVERTISEMENT

ಆಧಾರ್‌ ಜೋಡಣೆ: ಫೇಸ್‌ಬುಕ್‌ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2019, 19:30 IST
Last Updated 20 ಆಗಸ್ಟ್ 2019, 19:30 IST
   

ನವದೆಹಲಿ : ‘ಸಾಮಾಜಿಕ ಜಾಲತಾಣ ಖಾತೆಗಳಿಗೆ ಆಧಾರ್‌ ಸಂಖ್ಯೆಯನ್ನು ಜೋಡಿಸಬೇಕೆಂಬ ಮನವಿಗೆ ಸಂಬಂಧಿಸಿದಂತೆ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಬೇಕು’ ಎಂದು ಫೇಸ್‌ಬುಕ್‌ ಸಂಸ್ಥೆ ಮಾಡಿರುವ ಮನವಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮಂಗಳವಾರ ಒಪ್ಪಿದೆ.

ನ್ಯಾಯಮೂರ್ತಿಗಳಾದ ದೀಪಕ್‌ ಗುಪ್ತ ಹಾಗೂ ಅನಿರುದ್ಧ ಬೋಸ್‌ ಅವರನ್ನೊಳಗೊಂಡ ಪೀಠವು ಕೇಂದ್ರ ಸರ್ಕಾರ, ಗೂಗಲ್‌, ಟ್ವಿಟರ್‌, ಯೂಟ್ಯೂಬ್‌ ಹಾಗೂ ಇತರ ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿದ್ದು, ಸೆಪ್ಟೆಂಬರ್‌ 13ರ ಒಳಗಾಗಿ ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.

ಆಧಾರ್‌ ಜೋಡಣೆಗೆ ಸಂಬಂಧಿಸಿದಂತೆ ಪ್ರಸಕ್ತ ನಡೆಯುತ್ತಿರುವ ವಿಚಾರಣೆಯನ್ನು ಮುಂದುವರಿಸಬಹುದು. ಆದರೆ ಈ ಸಂಬಂಧ ಅಂತಿಮ ಆದೇಶವನ್ನು ನೀಡಬಾರದು ಎಂದು ಪೀಠವು ಮದ್ರಾಸ್‌ ಹೈಕೋರ್ಟ್‌ಗೆ ಸೂಚನೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.