ADVERTISEMENT

ಅಹಮದಾಬಾದ್‌ನ ಹೊರವಲಯದಲ್ಲಿ ಮದ್ಯ ಸೇವನೆ: 81 ಜನರ ವಿರುದ್ಧ ಕ್ರಮ

ಪಿಟಿಐ
Published 5 ಫೆಬ್ರುವರಿ 2026, 13:49 IST
Last Updated 5 ಫೆಬ್ರುವರಿ 2026, 13:49 IST
_
_   

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ನ ಹೊರವಲದಯದಲ್ಲಿ ಮದ್ಯ ಸೇವಿಸಿದ ಆರೋಪದ ಮೇಲೆ ಪೊಲೀಸರು 43 ಪುರುಷರನ್ನು ಬಂಧಿಸಿದ್ದು, 38 ಮಹಿಳೆಯರನ್ನು ಕೂಡ ವಶಕ್ಕೆ ಪಡೆದಿದ್ದಾರೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಪೊಲೀಸರು ಮದ್ಯದ ಬಾಟಲಿಗಳು, ಹುಕ್ಕಾಗಳು, ಕಾರುಗಳು, ಮೊಬೈಲ್ ಫೋನ್‌ಗಳು ಸೇರಿದಂತೆ ಒಟ್ಟು ₹2.3 ಕೋಟಿ ಮೌಲ್ಯದ ವಸ್ತುಗಳನ್ನು ಕೂಡ ವಶಪಡಿಸಿಕೊಂಡಿದ್ದಾರೆ.

ಗುಜರಾತ್‌ನಲ್ಲಿ ಮದ್ಯ ತಯಾರಿಕೆ, ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ.

ADVERTISEMENT

ಬುಧವಾರ ಮಧ್ಯರಾತ್ರಿಯ ನಂತರ ಇಲ್ಲಿನ ಸನಂದ್ ಬಳಿಯ ಸಫಲ್ ನಿರ್ವಾಣ ಗ್ರೀನ್ಸ್‌ ಎಂಬ ಖಾಸಗಿ ವಿಲ್ಲಾದಲ್ಲಿ ಮುಂಬೈ ಮೂಲದ ವ್ಯಕ್ತಿಯೊಬ್ಬರು ತನ್ನ ಮಾವನ 25ನೇ ವಿವಾಹ ವಾರ್ಷಿಕೋತ್ಸವದ ಪಾರ್ಟಿ ಆಯೋಜಿಸಿದ್ದರು.

ಪೊಲೀಸರು ಪಾರ್ಟಿ ನಡೆಯುತ್ತಿದ್ದಾಗ ದಾಳಿ ನಡೆಸಿ, ಅವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.