ನವದೆಹಲಿ: ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವುದು ಭಾರತೀಯ ಮೌಲ್ಯಗಳ ಕೇಂದ್ರ ಬಿಂದುವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಹೇಳಿದರು.
ಪ್ರತಿ ವರ್ಷ ಜೂನ್ 5 ಅನ್ನು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವುದು ಮತ್ತು ಜೀವವೈವಿಧ್ಯತೆಯನ್ನು ರಕ್ಷಿಸುವುದು ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯ ಕೇಂದ್ರ ಬಿಂದುವಾಗಿದೆ. ಮಾನವೀಯತೆಯು ಕೋವಿಡ್ ವಿರುದ್ಧ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾವು ಸುಸ್ಥಿರ ಭವಿಷ್ಯಕ್ಕಾಗಿ ಜಾಗತಿಕ ಸಮುದಾಯಗಳೊಂದಿಗೆ ಕೆಲಸ ಮಾಡಲು ಬದ್ಧರಾಗಿರೋಣ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.