ADVERTISEMENT

ಎಲ್‌ಜೆಪಿ ಸಂಸದ ಪ್ರಿನ್ಸ್‌ ಪಾಸ್ವಾನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಪಿಟಿಐ
Published 14 ಸೆಪ್ಟೆಂಬರ್ 2021, 8:24 IST
Last Updated 14 ಸೆಪ್ಟೆಂಬರ್ 2021, 8:24 IST
,
,   

ನವದೆಹಲಿ(ಪಿಟಿಐ): ಬಿಹಾರದ ಸಮಷ್ಠಿಪುರ ಲೋಕಸಭಾ ಕ್ಷೇತ್ರದ ಲೋಕ ಜನಶಕ್ತಿ ಪಾರ್ಟಿ (ಎಲ್‌ಜೆಪಿ) ಸಂಸದ ಪ್ರಿನ್ಸ್‌ ಪಾಸ್ವಾನ್‌ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

‘ನ್ಯಾಯಾಲಯದ ನಿರ್ದೇಶನದ ಅನ್ವಯ ಸಂಸದ ಪ್ರಿನ್ಸ್‌ ಪಾಸ್ವಾನ್‌ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ‘ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ನ್ಯಾಯಾಲಯದ ನಿರ್ದೇಶನದ ಮೇರೆಗೆ, ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ‘ ಎಂದು ಅಧಿಕಾರಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.